

ಕುಮಟಾ : ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಮತಿ ಪಟಗಾರ(59) ಅವರು ತೀವ್ರ ಅನಾರೋಗ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
ಅವರಿಗೆ ಪುತ್ರ, ಪುತ್ರಿ, ಅಪಾರ ಬಂಧುಬಳಗವಿದೆ. ಹೊನ್ನಾವರ ತಾಲೂಕಿನ ಕಡತೋಕದವರಾದ ಚಂದ್ರಮತಿ ಪಟಗಾರ ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡಿ ನಿವೃತ್ತಿಯ ಅಂಚಿನಲ್ಲಿದ್ದರು.
ಅತಿಯಾದ ರಕ್ತದ ಒತ್ತಡದಿಂದ ಆಸ್ಪತ್ರೆ ಸೇರಿ 3 ತಿಂಗಳಿಗೂ ಹೆಚ್ಚು ಕಾಲದಿಂದ ಕೋಮಾ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಿಸದೇ ಕುಮಟಾ ತಾಲೂಕು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪೊಲೀಸ್ ಕುಶಾಲ ತೋಪುಗಳನ್ನು ಸಿಡಿಸಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.