

ಬಂಕಾಪುರ: ಕೆರೆಯಲ್ಲಿ ಸ್ನಾನ ಮಾಡಲು ಹೋದ ಸರ್ಕಾರಿ ನೌಕರನೊಬ್ಬ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಗುಡ್ಡದ ಚನ್ನಾಪುರ ಹೊಸಕೆರೆಯಲ್ಲಿ ಮಂಗಳವಾರ ನಡೆದಿದೆ.
ಬಂಕಾಪುರ ಸರ್ಕಾರಿ ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಜ್ಞಾನೇಶ ಸುರೇಶ ದಳವೇನವರ (42) ಮೃತ ನೌಕರ.
ಇವರು ಬೆಳಗ್ಗೆ ವಾಯುವಿಹಾರ ಮುಗಿಸಿ ಕೆರೆಯಲ್ಲಿ ಸ್ನಾನ ಮಾಡಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.