

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನಿಲಜಿ ಗ್ರಾಮದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ವಾಕಿಂಗ್ ಟ್ರ್ಯಾಕ್, ಗಣೇಶ ವಿಸರ್ಜನೆಗಾಗಿ ಪ್ರತ್ಯೇಕ ಟ್ಯಾಂಕ್ ನಿರ್ಮಾಣ ಸೇರಿ ಇತರ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಗುಣಮಟ್ಟ ಕಾಪಾಡುವ ಜತೆಗೆ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಇಡೀ ಕ್ಷೇತ್ರ ಮಾದರಿಯಾದಾಗಲೇ ನನ್ನ ಕನಸು ನನಸಾಗುತ್ತದೆ. ಅಲ್ಲಿಯವರೆಗೂ ನಾನು ವಿಶ್ರಮಿಸುವುದಿಲ್ಲ ಎಂದರು.
ನಾಗೇಶ ದೇಸಾಯಿ, ಚಾಯಪ್ಪ ಕಾಕಾ ಹಾಗೂ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರಿದ್ದರು.