50 ಲಕ್ಷ ರೂ. ಮೌಲ್ಯದ ಮದ್ಯ ವಶ

liquor
Published on

ಬೆಳಗಾವಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದ್ದರೂ ವಿವಿಧೆಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಈವರೆಗೆ ಜಿಲ್ಲೆಯ 530 ಕಡೆಗಳಲ್ಲಿ ದಾಳಿ ನಡೆಸಿ 50 ಲಕ್ಷ ರೂ. ಮೌಲ್ಯದ ಮದ್ಯ ವಶಪಡಿಸಿಕೊಂಡಿದೆ.

ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆ ವೇಳೆ ಇಷ್ಟೊಂದು ಮೌಲ್ಯದ ಮದ್ಯ ಪತ್ತೆಯಾಗಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. 63 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಅಧಿಕಾರಿಗಳು 42 ಬೈಕ್, ಒಂದು ಕಾರು, ಎರಡು ಆಟೋರಿಕ್ಷಾ, ಮೂರು ಗೂಡ್ಸ್ ವಾಹನ ಜಪ್ತಿ ಮಾಡಿದ್ದಾರೆ. 34 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net