ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ 18ರಂದು

11 lxr 1- someshwar
Published on

ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಪ್ರಸಿದ್ಧ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ನ. 18ರಂದು ಲಕ್ಷ ದೀಪೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮೀಟಿ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ಹೇಳಿದರು.

ದೇವಸ್ಥಾನದ ಆವರಣದಲ್ಲಿ ಸೋಮವಾರ ಲಕ್ಷ ದೀಪೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ಪ್ರಚಾರ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಲಕ್ಷ್ಮದೀಪೋತ್ಸವ ಕಮೀಟಿ ಖಜಾಂಚಿ ಚನ್ನಪ್ಪ ಜಗಲಿ ಮಾತನಾಡಿ, ಅಂದು ಇಡೀ ಪಟ್ಟಣದಲ್ಲಿ ಹಬ್ಬ ವಾತಾವರಣವಿರುತ್ತದೆ. ದೇವಸ್ಥಾನಕ್ಕೆ ವಿಶೇಷ ವಿದ್ಯುತ್ ದೀಪಾಲಂಕಾರ ಮತ್ತು ಪುಷ್ಪಾಲಂಕಾರ ಮಾಡಲಾಗುತ್ತದೆ. ಸಾನ್ನಿಧ್ಯವನ್ನು ಮಹಾರಾಷ್ಟ್ರ ಕೊಲ್ಲಾಪುರದ ಶ್ರೀ ಕ್ಷೇತ್ರ ಸಿದ್ದಗಿರಿ ಮಹಾಸಂಸ್ಥಾನ ಕನ್ನೇರಿಯ ಅದೃಶ್ಯ ಕಾಡಸಿದ್ಧೇಶ್ವರ ಮಹಾಸ್ವಾಮಿಗಳು ವಹಿಸಿಕೊಳ್ಳುವರು.ಉಪಸ್ಥಿತಿಯನ್ನು ಮುಕ್ತಿಮಂದಿರ ಧರ್ಮ ಕ್ಷೇತ್ರದ ವಿಮಲರೇಣುಕ ವೀರ ಮುಕ್ತಿಮುನಿ ಶಿವಾಚಾರ್ಯರು ಹಾಗೂ ಆಧ್ಯಾತ್ಮಿಕ ವಿದ್ವಾಂಸರಾದ ಮಂಗಳೂರಿನ ಡಾ ಎಮ್ಮೆಸ್ಸೆಂ ಅಬ್ದುಲ್ ರಶೀದ ಝೈನಿ ಕಾಮೀಲ್ ಸಖಾಫಿ ವಹಿಸಿಕೊಳ್ಳುವರು. ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ. ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ ವಹಿಸುವರು. ಅತಿಥಿಗಳಾಗಿ ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಜಿ.ಎಂ. ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣವರ ಸೇರಿ ಹಲವರು ಆಗಮಿಸುವರು ಎಂದರು.

ವರ್ತಕ ಬಸವೇಶ ಮಹಾಂತಶೆಟ್ಟರ ಮಾತನಾಡಿ, ಲಕ್ಷ್ಮದೀಪೋತ್ಸವ ಕಾರ್ಯಕ್ರಮಕ್ಕೆ ಮಠಾಧೀಶರು, ವಿಚಾರವಂತರು, ಹಿರಿಯರು, ಗಣ್ಯರು ಆಗಮಿಸಲಿದ್ದು ಎಲ್ಲರೂ ಸೇರಿ ಅದ್ದೂರಿಯಾಗಿ ಲಕ್ಷದೀಪೋತ್ಸವ ಯಶಸ್ವಿಗೊಳಿಸೋಣ ಎಂದರು.

ಗುರುರಾಜ ಪಾಟೀಲಕುಲಕರ್ಣಿ, ಸುರೇಶ ರಾಚನಾಯ್ಕರ್, ಶಿವಯೋಗಿ ಅಂಕಲಕೋಟಿ, ವಿರುಪಾಕ್ಷ ಆದಿ, ಮಯೂರಗೌಡ ಪಾಟೀಲ, ನಂದೀಶ ಬಂಡಿವಾಡ, ಎನ್.ಆರ್ .ಸಾತಪೂತೆ, ಪ್ರಕಾಶ ಕೊಂಚಿಗೇರಿಮಠ, ಅಶೋಕಗೌಡ ಪಾಟೀಲ, ರಾಘವೇಂದ್ರ ಪೂಜಾರ, ಗಂಗಾಧರ ಉಮಚಗಿ, ರಾಜಶೇಖರಯ್ಯ ಶಿಗ್ಲಿಮಠ, ನೀಲಪ್ಪ ಕನವಳ್ಳಿ, ಬಸಣ್ಣ ಪುಠಾಣಿ, ಸೋಮಣ್ಣ ತಂಡಿಗೇರ ಸೇರಿದಂತೆ ಅನೇಕರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net