ಆದಿಚುಂಚನಗಿರಿಯಲ್ಲಿ ಲಕ್ಷದೀಪೋತ್ಸವ

ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಆಯೋಜಿಸಿದ್ದ ಲಕ್ಷ ದೀಪೋತ್ಸವಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಆಯೋಜಿಸಿದ್ದ ಲಕ್ಷ ದೀಪೋತ್ಸವಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು.
Published on

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿಯಲ್ಲಿ ಆಯೋಜಿಸಿದ್ದ ಲಕ್ಷದೀಪೋತ್ಸವಕ್ಕೆ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು.

ಶ್ರೀ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆ ಕಾರ್ತಿಕ ಮಾಸದ ಕೊನೆಯ ದಿನ ಲಕ್ಷದೀಪೋತ್ಸವ ನಡೆಯಿತು. ಲಕ್ಷದೀಪೋತ್ಸವ ಪ್ರಯುಕ್ತ ಕ್ಷೇತ್ರದ ಅಧಿದೇವತೆಗಳಿಗೆ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು. ಮಠದ ಆವರಣದಲ್ಲಿನ ನವಗ್ರಹ ಮಂಟಪದಲ್ಲಿ ವಿಶೇಷ ಪೂಜೆ ನಡೆಯಿತು. ನಂತರ ಕಾಲಭೈರವೇಶ್ವರಸ್ವಾಮಿ ದೇವಾಲಯದ ಮುಂಭಾಗದಲ್ಲಿ ದೀಪ ಬೆಳಗುವ ಮೂಲಕ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.

ಶ್ರೀಕಾಲಭೈರವೇಶ್ವರಸ್ವಾಮಿ, ಸ್ಥಂಭಾಂಬಿಕೆ ದೇವಿಗೆ ಪೂಜೆ ಸಲ್ಲಿಸಿದ ನಂತರ ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಿಸಿದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕುಂಬಳಕಾಯಿ ದೀಪದ ಆರತಿ ಮಾಡಿದರು.

ದೀಪೋತ್ಸವ ಹಾಗೂ ಪೂಜಾ ಕೈಂಕರ್ಯ ಮುಗಿದ ನಂತರ ಅನ್ನದಾಸೋಹ ನಡೆಯಿತು. ಪ್ರಸನ್ನನಾಥ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net