ಲಕ್ಷ್ಮಣ ಅಧ್ಯಕ್ಷ, ಲಕ್ಷ್ಮೀ ಉಪಾಧ್ಯಕ್ಷೆ

web3
ಜಾಗನೂರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಲಕ್ಷ್ಮಣ ಮಂಗಿ ಹಾಗೂ ಉಪಾಧ್ಯಕ್ಷೆ ಲಕ್ಷ್ಮೀ ಹಣಮಂತಗೋಳ ಅವರನ್ನು ಸನ್ಮಾನಿಸಲಾಯಿತು. ಗ್ರಾಪಂ ಸದಸ್ಯರು, ಪಿಡಿಒ ಇತರರಿದ್ದರು.
Published on

ಕಬ್ಬೂರ: ಸಮೀಪದ ಜಾಗನೂರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಲಕ್ಷ್ಮಣ ಬಸವಣ್ಣಿ ಮಂಗಿ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಮಲ್ಲೇಶ ಹಣಮಂತಗೋಳ ಸೋಮವಾರ ಆಯ್ಕೆಯಾದರು.

ಇಲ್ಲಿನ ಗ್ರಾಪಂ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಟ್ಟು ಮೂರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಎರಡು ನಾಮಪತ್ರ ಸಲ್ಲಿಕೆಯಾಗಿದ್ದವು.

31 ಸದಸ್ಯರ ಸಂಖ್ಯಾಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ 23 ಮತ ಪಡೆದು ಅಧ್ಯಕ್ಷರಾಗಿ ಲಕ್ಷ್ಮಣ ಮಂಗಿ ಹಾಗೂ 22 ಮತ ಪಡೆದು ಉಪಾಧ್ಯಕ್ಷರಾಗಿ ಲಕ್ಷ್ಮೀ ಹಣಮಂತಗೋಳ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಾ.ಮಲ್ಲಪ್ಪ ರಾಹುತನವರ ಘೋಷಿಸಿದರು. ಗ್ರಾಪಂ ಸದಸ್ಯರು, ಪಿಡಿಒ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net