ಉಗ್ರರ ಮಟ್ಟ ಹಾಕಲು ಒಂದಾಗಿ

Lakshmi Hebbalakar Meeting 7
Published on

ಬೆಳಗಾವಿ:ದೇಶಕ್ಕೆ ಮಾರಕವಾಗಿರುವ ಉಗ್ರರನ್ನು ಮಟ್ಟಹಾಕಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರನ್ನು ಮಟ್ಟಹಾಕುವ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ನಮ್ಮ ನಾಯಕರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಉಗ್ರರನ್ನು ಮಟ್ಟಹಾಕುವುದೇ ನಮ್ಮೆಲ್ಲರ ಉದ್ದೇಶವಾಗಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ವಂಚಿಸುತ್ತಿರುವುದು ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಖುದ್ದು ನಾನೇ ದೂರು ನೀಡಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net