ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಶಾಕ್​ ಕೊಡಲು ಸಚಿವ ರಮೇಶ್​ ಜಾರಕಿಹೊಳಿಯಿಂದ ಲಂಚ್​ ಪಾಲಿಟಿಕ್ಸ್!​

Ramesh Jarakiholi 29 Dec 19
Published on

ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಣಿಯಲು ಸಚಿವ ರಮೇಶ್​ ಜಾರಕಿಹೊಳಿ ಗ್ರಾಮೀಣ ಕ್ಷೇತ್ರದಲ್ಲಿ ಲಂಚ್ ಪಾಲಿಟಿಕ್ಸ್ ಮೊರೆ ಹೋಗಿದ್ದಾರೆ. ಬೆಳಗಾವಿಯಲ್ಲಿ ಮತ್ತಷ್ಟು ಹಿಡಿತ‌ ಸಾಧಿಸುವ ಯೋಜನೆ ರೂಪಿಸಿದ್ದಾರೆ.

ಬೆಳಗಾವಿಯ ನಾವಗೆ ಕ್ರಾಸ್ ಬಳಿಯ ಇರುವ ಗಣೇಶ್ ಭಾಗದಲ್ಲಿ ಸ್ನೇಹ ಭೋಜನ ಕೂಟ ಕಾರ್ಯಕ್ರಮ ಏರ್ಪಡಿಸಲಾಗಿದೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದ ನೂತನ ಸದಸ್ಯರಿಗೆ ಸತ್ಕಾರ ಮಾಡುವ ಮೂಲಕ ಗ್ರಾಮೀಣ ಕ್ಷೇತ್ರವನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಯೋಜನೆ ರೂಪಿಸಿದ್ದಾರೆ.

ಬಿಜೆಪಿಯ ಯುವ ಮುಖಂಡ ಧನಂಜಯ ಜಾಧವ್​ ಅವರು ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಸತ್ಕಾರ ಸಮಾರಂಭದ ಬಳಿಕ ನೂತನ ಸದಸ್ಯರಿಗೆ ಹಾಗೂ ಕಾರ್ಯಕರ್ತರಿಗೆ ಭೋಜನ ಕೂಟ ಆಯೋಜಿಸಲಾಯಿತು. ಈ ಮೂಲಕ ನಿಧಾನವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಹಿಡಿತ ಸಾಧಿಸಲು ಸಚಿವ ರಮೇಶ್ ಜಾರಕಿಹೊಳಿ‌ ಪ್ಲಾನ್ ಮಾಡಿದ್ದಾರೆಂದು ತಿಳಿದುಬಂದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net