

ಬೈಂದೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೈಂದೂರು ಕ್ಷೇತ್ರ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಶ್ರೀ ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ನಡೆಯಿತು.
ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಲಕ್ಷ್ಮೀ ರಾವೇಂದ್ರ ಮರು ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ರಾಜು ಕೊಲ್ಲೂರು, ಕೋಶಾಧಿಕಾರಿಯಾಗಿ ರಾಜು ಮೊಗವೀರ ಅವರನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಯ 25ನೇ ವರ್ಷದ ಮಹಾಸವಾವೇಶದ ಕರ ಪತ್ರ ಬಿಡುಗಡೆ ವಾಡಲಾಯಿತು.
ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾಘವೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈವರೆಗೆ ಉತ್ತಮ ಸೇವೆ ಸಲ್ಲಿಸಿದ ಸಮಿತಿ ಅಧ್ಯಕ್ಷೆ ಲಕ್ಷ್ಮೀ ರಾವೇಂದ್ರ, ಜ್ಯೋತಿ ಉಪ್ಪುಂದ, ರಾಜು ಮೊಗವೀರ ಇವರನ್ನು ಗೌರವಿಸಲಾಯಿತು.
ರಾಜ್ಯ ಸಮಿತಿ ಕೋಶಾಧಿಕಾರಿ ರಾಮಚಂದ್ರ, ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಗುರುರಾಜ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಯಾನಂದ ಕೋಟ್ಯಾನ್, ಉಪಾಧ್ಯಕ್ಷ ಮಹಾಬಲ ಮೊಗವೀರ, ಕ್ಷೇತ್ರ ಸಮಿತಿ ಪ್ರದಾನ ಕಾರ್ಯದರ್ಶಿ ಜ್ಯೋತಿ ಉಪ್ಪುಂದ, ಕೋಶಾಧಿಕಾರಿ ರಾಜು ಮೊಗವೀರ ಯಡ್ತರೆ, ರಾಜು ಕೊಲ್ಲೂರು ಇದ್ದರು. ನಾಗೇಂದ್ರ ಚಿತ್ತೂರು ನಿರೂಪಿಸಿದರು.