ಲಕ್ಷ್ಮೀನಾರಾಯಣಸ್ವಾಮಿ ದೇಗುಲ ಆವರಣ ಸ್ವಚ್ಛ

1-pnp 4a
ಹಾರೋಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ನಡೆಸಿದರು.
Published on

ಪಾಂಡವಪುರ: ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಸ್ವಚ್ಛತಾ ಹೀ ಸೇವಾ ಅಭಿಯಾನದಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಹಾರೋಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ದೇವಸ್ಥಾನದ ಸುತ್ತಮುತ್ತಲ ಆವರಣದಲ್ಲಿ ಬೆಳೆದಿದ್ದ ಗಿಡ-ಗಂಟಿಗಳನ್ನು ತೆರವುಗೊಳಿಸುವ ಮೂಲಕ ಇಡೀ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಜತೆಗೆ ಇದೇ ವೇಳೆ ದೇವಸ್ಥಾನದ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಬಿಜೆಪಿ ಕ್ಷೇತ್ರಾಧ್ಯಕ್ಷ ಎಲ್.ಅಶೋಕ್, ಪ್ರಧಾನ ಕಾರ್ಯದರ್ಶಿ ನೀಲನಹಳ್ಳಿ ಧನಂಜಯ, ಮುಖಂಡರಾದ ರೈಸ್‌ಮಿಲ್ ತಮ್ಮಣ್ಣ, ಎಚ್.ಡಿ.ಶ್ರೀಧರ್, ಡೇರಿ ರಾಮು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net