

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ ಸೋಮವಾರ ಆದೇಶಿಸಿದೆ.
ಮೊಗವೀರ ಸಮುದಾಯದ ಲಾಲಾಜಿ ಅವರು ಮೂರು ಬಾರಿ ಕಾಪು ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಎದುರು 1300 ಅಲ್ಪಮತದಿಂದ ಸೋಲನುಭವಿಸಿದ್ದ ಅವರು, 2018ರಲ್ಲಿ 11917 ಮತಗಳ ಅಂತರದಿಂದ ಭರ್ಜರಿ ಜಯಗಳಿದ್ದರು. 1994ರಲ್ಲಿ ಕಾಪು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಕಣಕ್ಕೆ ಇಳಿದಿದ್ದರು.