ನಿವೃತ್ತ ನೌಕರರ ಸಂಘಕ್ಕೆ ನಿವೇಶನ ಭರವಸೆ

03 RON 1
Published on

ರೋಣ: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕು ಘಟಕಕ್ಕೆ ಶೀಘ್ರದಲ್ಲಿಯೇ ನಿವೇಶನ ಒದಗಿಸಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಅಂಜುಮನ್ ಸಂಸ್ಥೆಯ ಶಾದಿಮಹಲ್‌ನಲ್ಲಿ ಭಾನುವಾರ ಜರುಗಿದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ತಾಲೂಕು ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ನೌಕರರು ರೋಣ ತಾಲೂಕಿನಲ್ಲಿ ಸಂಘಟನೆ ಮಾಡಿದ್ದು ಸ್ವಾಗತಾರ್ಹ. ಸಂಘಟನೆ ಇದ್ದರೆ ಸರ್ಕಾರದ ಸೌಲಭ್ಯಗಳು ಸಕಾಲಕ್ಕೆ ಸಿಗುತ್ತದೆ. ವೃತ್ತಿನಿರತ ನೌಕರರು ನಿವೃತ್ತರ ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದರು. ನಿವೃತ್ತ ನೌಕರರು ಸಲ್ಲಿಸಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದರು.
80 ವರ್ಷ ಪೂರೈಸಿದ ನಿವೃತ್ತ ನೌಕರರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಗುರುಪಾದ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಘದ ಅಧ್ಯಕ್ಷ ಎ.ಎಸ್. ಖತೀಬ್ ಅಧ್ಯಕ್ಷತೆ ವಹಿಸಿದ್ದರು. ಎಲ್.ಎಸ್. ಹಂಚಿನಾಳ, ಸಿ.ಬಿ. ರಡ್ಡೇರ, ವೈ.ಡಿ. ಗಾಣಿಗೇರ, ಸಿ.ಎಸ್. ದಾನಪ್ಪಗೌಡರ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net