ಜಾಗದ ಜಗಳ ಕೊಲೆಯಲ್ಲಿ ಅಂತ್ಯ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಗ್ರಾಮದ ಪರಶುರಾಮ ಸಕ್ರೆಪ್ಪ ಹಾದಿಮನಿ (56) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ದ್ಯಾಮಪ್ಪ ಬಡಿಗೇರ ಕೊಲೆ ಮಾಡಿದ ಆರೋಪಿ.

ಮನೆ ಪಕ್ಕದ ಜಾಗದ ವಿಚಾರಕ್ಕೆ ಪರಶುರಾಮ ಹಾಗೂ ದ್ಯಾಮಪ್ಪ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಆಗ ಪರಶುರಾಮಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ದ್ಯಾಮಪ್ಪ ಪರಾರಿಯಾಗಿದ್ದು, ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ್​, ಡಿವೈಎಸ್ಪಿ ಎಸ್​.ಎಂ. ನಾಗರಾಜ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net