

ಬ್ಯಾಡಗಿ: ಜಮೀನಿನಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಮೃತಪಟ್ಟ ಟನೆ ತಾಲೂಕಿನ ಹಳೆ ಶಿಡೇನೂರ ಗ್ರಾಮದಲ್ಲಿ ಬುಧವಾರ ನಡೆದಿದೆ.
ತಬರೇಜ್ ಮರ್ದಾನಸಾಬ ಬ್ಯಾಡಗಿ (45) ಮೃತ ರೈತ.
ಇವರು ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಕೆಳಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.