ಭೂ ಕಬಳಿಕೆ ಪ್ರಕರಣ; ಕೆಆರ್‌ಎಸ್ ಪಕ್ಷದಿಂದ ಪತ್ರಿಕಾ ವರದಿಗಳ ಪ್ರದರ್ಶನ

krs party protest
ವಿಜಯಪುರ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಭೂ ಹಗರಣಗಳಿಗೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು.
Published on

ವಿಜಯಪುರ: ಖೊಟ್ಟಿ ದಾಖಲೆ ಸೃಷ್ಠಿಸಿ ಭೂಮಿ ಕಬಳಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿ ಪ್ರದರ್ಶಿಸುವ ಮೂಲಕ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪದಾಧಿಕಾರಿಗಳು ಗಮನ ಸೆಳೆದರು.

ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೆಡಿಪಿ ಸಭೆಗೂ ಮುನ್ನ ಜಮಾಯಿಸಿದ ಕಾರ್ಯಕರ್ತರು ‘ವಿಜಯವಾಣಿ’ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳ ಛಾಯಾಚಿತ್ರ, ಬ್ಯಾಣರ್ ಹಿಡಿದು ಪ್ರತಿಭಟನೆ ನಡೆಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ ಖೊಟ್ಟಿ ದಾಖಲೆ ಸೃಷ್ಠಿಸಿ ಭೂಮಿ ಕಬಳಿಸುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇದರಿಂದ ಜನರು ಆತಂಕಗೊಂಡಿದ್ದಾರೆ. ಈ ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರು ಈ ಬಗ್ಗೆ ಗಮನ ಹರಿಸಬೇಕು. ಸಮಗ್ರ ತನಿಖೆ ನಡೆಸಬೇಕು. ಉಪ ನೋಂದಣಿ ಇಲಾಖೆಯಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಮುಖಂಡರಾದ ಅಶೋಕ ಜಾಧವ, ಗಣಪತಿ ರಾಠೋಡ, ರಾಘವೇಂದ್ರ ಛಲವಾದಿ, ಲಕ್ಷ್ಮಣ ಚಡಚಣ, ದೀಪಾ ಮನೂರ, ದುರ್ಗಪ್ಪ ಬೂದಿಹಾಳ, ಶ್ರೀಶೈಲ ಮಠ, ವಿಕ್ರಮ ವಾಘಮೋರೆ, ರಾವತಪ್ಪ ಮದಬಾವಿ, ಹಮಿದ ಇನಾಮದಾರ, ಮಂಗಲಾ ಹಾದಿಮನಿ, ಸುನಿಲ ರಾಠೋಡ, ಅಣ್ಣಾ ಪೂಜಾರಿ, ರಂಜಾನ್‌ಸಾಬ ಕೊಂಕಣಿ, ಅಪ್ಪಾಸಾಬ ಛತ್ರಿ ಮತ್ತಿತರದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net