ಭೂ ಮಾಲೀಕರ ಸಮಸ್ಯೆ ಪರಿಹಾರಕ್ಕೆ ಯತ್ನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭರವಸೆ

mng--31 Aug Dc meeting
Published on

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು - ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಂ.ಪಿ. ಅವರು ಭರವಸೆ ನೀಡಿದರು.


ಗುರುವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭೂ ಮಾಲೀಕರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಭೂ ಮಾಲೀಕರಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿಗಳು ಅಭಿವೃದ್ಧಿ ಸೂಚ್ಯಂಕದ ಮಾಪನವಾಗಿದ್ದು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಆರ್ಥಿಕ ಚಟುವಟಿಕೆಗಳ ಏಳಿಗೆಗೆ ಪೂರಕವಾಗಿರುತ್ತದೆ. ಈ ದಿಸೆಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಒದಗಿಸಿದ ಭೂ ಮಾಲೀಕರ ಸಮಸ್ಯೆಗಳನ್ನು ಬಗೆ ಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ಹೇಳಿದರು.


ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ವಿಶೇಷ ಭೂಸ್ವಾದೀನಾಧಿಕಾರಿ ಮಹಮದ್ ಇಸಾಕ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸಂಬಂಧಿಸಿದ ಅಧಿಕಾರಿಗಳು,
ಭೂ ಮಾಲೀಕರ ಹೋರಾಟ ಸಮಿತಿಯ ಅಧ್ಯಕ್ಷರಾದ ಮರಿಯಮ್ಮ ಥಾಮಸ್, ಸಂಚಾಲಕರಾದ ಪ್ರಕಾಶ್, ಪದಾಧಿಕಾರಿಗಳಾದ ರತ್ನಾಕರ, ಜಯರಾಮ್ ಪೂಜಾರಿ, ವಿಶ್ವಜಿತ್ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net