

ಹಿರಿಯೂರು: ಮೇಟಿಕುರ್ಕೆ ಬಳಿ ಕೈಗಾರಿಕಾ ವಲಯ ಸ್ಥಾಪಿಸಲು ನಮ್ಮ ಅಭ್ಯಂತರ ಇಲ್ಲ. ಆದರೆ, ಭೂಮಿ ಕಳೆದುಕೊಳ್ಳುವ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಜಿಲ್ಲಾ ರೈತ ಸಂಘ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ ಒತ್ತಾಯಿಸಿದ್ದಾರೆ.
ರೈತರಿಗೆ ಪೂರಕವಾದ ಕೈಗಾರಿಕೆ ಸ್ಥಾಪನೆ, ಕೃಷಿ ಉತ್ಪನ್ನಕ್ಕೆ ಪ್ರೋತ್ಸಾಹ ನೀಡಬೇಕು. ಭೂಮಿ ಕಳೆದುಕೊಳ್ಳುವ ಹಾಗೂ ಸ್ಥಳೀಯರಿಗೆ ಕೈಗಾರಿಕಾ ವಲದಲ್ಲಿ ಉದ್ಯೋಗ ಮೀಸಲು ನೀತಿ ಜಾರಿಗೊಳಿಸಬೇಕು. ಪರಿಸರ ಸ್ನೇಹಿ ಕೈಗಾರಿಕೆ ವಲಯ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.