

ರಾಣೆಬೆನ್ನೂರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಬೆನಕನಕೊಂಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಕರಿಯಮ್ಮ ಕರಬಸಪ್ಪ ಮುದಿಹಾಳ (65) ಮೃತ ಮಹಿಳೆ.
ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ರಾಣೆಬೆನ್ನೂರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.