

ಬಂಕಾಪುರ: ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಮೂಕಬಸರಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ರೇಣವ್ವ ಚನ್ನಪ್ಪ ಡಾಣಗಲ್ಲ (38) ಮೃತ ಮಹಿಳೆ.
ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.