ಬಂಕಾಪುರ: ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಇಬ್ರಾಹಿಂಪೂರ ಗ್ರಾಮದಲ್ಲಿ ಭಾನುವಾರ ನಡೆದಿದೆ..ಗಿರಿಜವ್ವ ಅಶೋಕ ಶೆಟ್ಟೆಣ್ಣವರ (45) ಮೃತ ಮಹಿಳೆ..ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.