ಜಮೀನುಗಳ ಹಕ್ಕುಪತ್ರ ನೀಡಿ

chn march 20 prathibatane (2)
Published on

ಚನ್ನಗಿರಿ: ತಾಲೂಕಿನಲ್ಲಿ ನೂರಾರು ವರ್ಷಗಳಿಂದ ಅರಣ್ಯ ಅವಲಂಬಿತ ರೈತರು ಸಾಗುವಳಿ ಮಾಡಿಕೊಂಡು ಬಂದ ಜಮೀನುಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ತಾಲೂಕು ಭೂ ಹಕ್ಕುದಾರರ ವೇದಿಕೆ ಕಾರ್ಯಕರ್ತರು ಹಾಗೂ ರೈತರು ಅರಣ್ಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನೇತೃತ್ವ ವಹಿಸಿದ್ದ ಭೂ ಹಕ್ಕುದಾರರ ವೇದಿಕೆ ರಾಜ್ಯ ಸಂಚಾಲಕ ರೂಪನಾಯ್ಕ ಮಾತನಾಡಿ, ಅರಣ್ಯ ಹಕ್ಕು ಸರ್ವೋಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದ ನಿರ್ದೇಶನದಂತೆ ಅರ್ಜಿಗಳನ್ನು ಮರು ಪರಿಶೀಲಿಸುವಂತೆ ಸುತ್ತೋಲೆ ಹೊರಡಿಸಿದೆ. ಆದರೆ, ಇದಕ್ಕೆ ಪೂರಕವಾಗಿ ಡಿಸಿ,ಎಸಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ದೂರಿದರು.

ಸಾಗುವಳಿ ಮಾಡುವಂತಹ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಲು ನಮ್ಮ ವೇದಿಕೆ ಬಿಡುವುದಿಲ್ಲ, ತಾಲೂಕಿನಲ್ಲಿ ಸುಮಾರು 14628 ಎಕರೆ ಅರಣ್ಯ ಭೂಮಿ ಮತ್ತು ಕಂದಾಯ ಭೂಮಿಗಳಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಸೆಕ್ಷನ್ 13ರ ಅಡಿ ಇರುವ ಸಾಕ್ಷಿಗಳನ್ನು ಪರಿಶೀಲಿಸಿ ಶಿಫಾರಸು ವರದಿ ನೀಡಬೇಕು. ನನೆಗುದಿಗೆ ಬಿದ್ದಿರುವ ಅರ್ಜಿ ಪರಿಶೀಲಿಸಿ ತಕ್ಷಣ ಭೂಮಿ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net