ಜಮೀನಿನಲ್ಲಿ ನೀರು ಹಾಯಿಸುತ್ತಿದ್ದ ರೈತ ಹಾವು ಕಚ್ಚಿ ಸಾವು

Snake-isolated-768x401
Published on

ಹಾನಗಲ್ಲ: ಜಮೀನಿನಲ್ಲಿ ನೀರು ಹಾಯಿಸುತ್ತಿದ್ದ ರೈತ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ.
ಗ್ರಾಮದ ಇಂತಿಯಾಜಅಹ್ಮದ್ ಕುತ್ಬುದ್ದೀನ್ ಯಳವಟ್ಟಿ (29) ಮೃತ ರೈತ.
ಈತ ಜಮೀನಿನಲ್ಲಿ ಕೊತಂಬರಿ ಬೆಳೆಗೆ ನೀರು ಹಾಯಿಸುತ್ತಿದ್ದ ಸಮಯದಲ್ಲಿ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಅವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net