ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಹಾವು ಕಚ್ಚಿ ಸಾವು

Snake-isolated-768x401
Published on

ರಾಣೆಬೆನ್ನೂರ: ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ತಾಲೂಕಿನ ತಾಲೂಕಿನ ಅಂತರವಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗುರುಶಾಂತಪ್ಪ ಹನುಮಪ್ಪ ಚಲವಾದಿ (60) ಮೃತ ರೈತ.

ಇವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ನಗರದ ತಾಲೂಕು ಸರ್ಕಾರಿ ದಾಖಲಿಸಿ ಚಿಕಿತ್ಸೆ ಕೊಡಿಸಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net