ರಸ್ತೆ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ

IMG-20240914-WA0257
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಸಬಾ ಹೋಬಳಿಯ ಮುರುಂಡಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಶನಿವಾರ ಭೂಮಿ ಪೂಜೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಶಿವಲಿಂಗೇಗೌಡ ಪ್ರತಿ ಗ್ರಾಮಗಳಿಗೆ ಸಂಪರ್ಕ ರಸ್ತೆ ಗ್ರಾಮಗಳ ಪರಿಮಿತಿಯಲ್ಲಿ ರಸ್ತೆಗಳನ್ನು ಅಭಿವೃದ್ದಿಪಡಿಸಲಾಗುವುದು. ಗುತ್ತಿಗೆರದಾರರು ಉತ್ತಮವಾಗಿ ಕಾರ್ಯ ನಿರ್ವಹಿಸಲು ಇಂಜಿನಿಯರ್‌ಗಳು ಗಮನವಹಿಸಬೇಕು ಎಂದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುಸಿದ್ದಪ್ಪ, ಮಾಜಿ ಅಧ್ಯಕ್ಷ ಜವನಪ್ಪ, ಮಾಜಿ ಎಪಿಎಂಸಿ ಅಧ್ಯಕ್ಷ ಶಿವಯ್ಯ, ಗ್ರಾ.ಪಂ. ಸದಸ್ಯರಾದ ರೋಹಿತ್, ಅಶೋಕ್, ರಂಗನಾಥ್, ಕೇಶವ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮುನಿರಾಜು, ಗುತ್ತಿಗೆದಾರ ಶ್ರೀಕಂಠಮೂರ್ತಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net