

ಶಿವಮೊಗ್ಗ: ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕ್‌ಆಫ್‌ಗೆ ವಿಸಿಬಿಲಿಟಿ ಸಮಸ್ಯೆ ಶಿವಮೊಗ್ಗದಲ್ಲಿ ಮಾತ್ರವಲ್ಲ, ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲೂ ಇದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಕುವೆಂಪು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಸಿಬಿಲಿಟಿ ಕೊರತೆಯಿಂದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಪದೇಪದೆ ರದ್ದಾಗುತ್ತಿರುವುದು ಗಮನದಲ್ಲಿದೆ. ನನಗಿರುವ ಮಾಹಿತಿ ಪ್ರಕಾರ ವಿಮಾನಗಳ ಲ್ಯಾಂಡಿಂಗ್ ಮತ್ತು ಟೇಕ್‌ಆಫ್‌ಗೆ ವಿಸಿಬಿಲಿಟಿ ಸಮಸ್ಯೆ ಎದುರಾಗುತ್ತಿದೆ ಎಂದು ತಿಳಿಸಿದರು.
ಪೈಲಟ್‌ಗಳು ರಿಸ್ಕ್ ತೆಗೆದುಕೊಂಡು ವಿಮಾನಗಳ ಲ್ಯಾಂಡಿಂಗ್ ಅಥವಾ ಟೇಕ್‌ಆಫ್ ಮಾಡುವುದಿಲ್ಲ. ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ. ಗುತ್ತಿಗೆದಾರರಿಗೆ ಬಿಲ್ ಬಾಕಿ ಇದ್ದು, ಕೆಲ ತಾಂತ್ರಿಕ ಸಲಕರಣೆಗಳ ಅಗತ್ಯವಿದೆ ಎಂದರು.