ಜಮಖಂಡಿ ಸಮೀಪ ಮಣ್ಣಿನ ಗುಡ್ಡ ಕುಸಿದು ಓರ್ವ ಸಾವು, ಒಬ್ಬನ ಸ್ಥಿತಿ ಗಂಭೀರ

Jamakhandi MadhuraKhandi village landslide 12 MAR 20
Published on

ಬಾಗಲಕೋಟೆ: ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದಲ್ಲಿ ಮಣ್ಣು ಅಗೆಯುವಾಗ ಕುಸಿತ ಗುಡ್ಡ ಕುಸಿದ ಪರಿಣಾಮ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.

ಗುಡ್ಡದ ಬದಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ದುರಂತ ಸಂಭವಿಸಿದೆ. ಕೂಡಲೇ ಸ್ಥಳೀಯರು ಜೆಸಿಬಿ ನೆರವಿನೊಂದಿಗೆ ಮಣ್ಣನ್ನು ಸರಿಸಿ ಇಬ್ಬರನ್ನೂ ಹೊರತೆಗೆದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಒಬ್ಬನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಇನ್ನೊಬ್ಬನ ಸ್ಥಿತಿ ಗಂಭೀರವಾಗಿತ್ತು.

ಮೃತನನ್ನು ಚೇತನ್ ಪೂಜಾರಿ (22) ಎಂದು ಗುರುತಿಸಲಾಗಿದೆ. ವಿಠ್ಠಲ್ ಜೊಂಗನವರ್ ಗಂಭೀರ ಗಾಯಗೊಂಡಿದ್ದು, ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net