ಕನ್ನಡ ಬೆಳವಣಿಗೆಗೆ ಕವಿಗಳ ಕೊಡುಗೆ ಅಪಾರ

08SPT04
Published on

ಸೋಮವಾರಪೇಟೆ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ, ಐಗೂರು ಹೋಬಳಿ ಕ.ಸಾ.ಪ ಘಟಕ ವತಿಯಿಂದ ಯಡವಾರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಎಸ್.ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು.


ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ ಎಂಬ ವಿಚಾರದಲ್ಲಿ ನಿವೃತ್ತ ಉಪನ್ಯಾಸಕ ಡಿ.ಎಸ್.ಚಂಗಪ್ಪ ಮಾತನಾಡಿ, ಕನ್ನಡದ ಬೆಳವಣಿಗೆಯಲ್ಲಿ ಕವಿಗಳ ಕೊಡುಗೆ ಅಪಾರವಾದುದು. ನವೋದಯ ಹೊಸ ಸಾಹಿತ್ಯ ಪ್ರಕಾರದಲ್ಲಿ ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಕನ್ನಡ ಸಾಹಿತ್ಯ ಬೆಳೆವಣಿಗೆಗೆ ಕಾರಣವಾಯಿತು ಎಂದರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಐಗೂರು ಅರೆಭಾಷೆ ಸಂಘದ ಅಧ್ಯಕ್ಷ ಬಾರನ ಭರತ್, ಕನ್ನಡ ಭಾಷೆಯನ್ನು ಮಾತನಾಡುವ ಮೂಲಕ ಭಾಷಾ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಹೇಳಿದರು.


ಐಗೂರು ಹೋಬಳಿ ಘಟಕದ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಪ್ರಮುಖರಾದ ಎ.ಪಿ. ವೀರರಾಜು, ಕೆ.ಪಿ.ದಿನೇಶ್, ಶಾಲಾ ಮುಖ್ಯ ಶಿಕ್ಷಕ ಕುಮಾರ, ವಿಶ್ವನಾಥ ರಾಜೇಅರಸ್, ಸರಳಕುಮಾರಿ ಇದ್ದರು. ಇದೇ ಸಂದರ್ಭ ನಿವೃತ್ತ ಉಪನ್ಯಾಸಕ ಡಿ.ಎಸ್. ಚಂಗಪ್ಪ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net