ಕನ್ನಡ ಪ್ರೀತಿಯಿಂದ ಭಾಷೆ ಬೆಳವಣಿಗೆ

kannada rajyothsva
ಕನ್ನಡ ರಾಜ್ಯೋತ್ಸವದಲ್ಲಿ ನವೀನ ಶೆಟ್ಟಿ ಮಡಾಮಕ್ಕಿ ಅವರನ್ನು ಸನ್ಮಾನಿಸಲಾಯಿತು.
Published on

ಹೆಬ್ರಿ: ಕನ್ನಡ ಭಾಷೆ ಮತ್ತು ಸಂಸ್ಕೃತಿ ಸತ್ವಯುತವಾದುದು. ಪ್ರಾಚೀನ ಮತ್ತು ವೈಶಿಷ್ಟೃಗಳನ್ನು ಹೊಂದಿರುವ ಕನ್ನಡ ನಾಡು ನುಡಿ ನಮ್ಮ ಹೆಮ್ಮೆ. ಕನ್ನಡದ ಕುರಿತು ಅಭಿಮಾನದ ಜತೆ ಕನ್ನಡಕ್ಕಾಗಿ ಕೆಲಸ ಮಾಡುವ ಮನಸ್ಸು ಬೇಕು. ವಿದ್ಯಾರ್ಥಿಗಳಲ್ಲಿ ಕನ್ನಡದ ಪ್ರೀತಿ ಬೆಳೆಸುವಲ್ಲಿ ಯಶಸ್ವಿಯಾದರೆ ಭಾಷೆ ಬೆಳೆಯುತ್ತದೆ ಎಂದು ಪ್ರಧಾನ ಭಾಷಣಕಾರ ನವೀನ ಶೆಟ್ಟಿ ಮಡಾಮಕ್ಕಿ ಹೇಳಿದರು.

ಶಾಲಾ ಸಭಾಂಗಣದಲ್ಲಿ ಸರ್ಕಾರಿ ಪಪೂ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ, ಅಕ್ಷರ ಸಾಹಿತ್ಯ ಸಂಘ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕು ಘಟಕ, ಸೀನಿಯರ್ ಛೇಂಬರ್ ಇಂಟರ್‌ನ್ಯಾಷನಲ್ ಹೆಬ್ರಿ ಘಟಕ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಅಧ್ಯಕ್ಷ ನಾಗೇಶ ನಾಯಕ್ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹೆಬ್ರಿಯ ಸೀನಿಯರ್ ಛೇಂಬರ್ ಅಧ್ಯಕ್ಷ ಪ್ರಕಾಶ ಶೆಟ್ಟಿ, ಪ್ರಮುಖರಾದ ಟಿ.ಜಿ.ಆಚಾರ್ಯ, ರಘುರಾಮ ಶೆಟ್ಟಿ, ಆಶಾ, ವಕೀಲ ಕೃಷ್ಣ ಶೆಟ್ಟಿ, ಉಪಪ್ರಾಂಶುಪಾಲ ದಿವಾಕರ ಮರಕಾಲ ಎಸ್., ಅಕ್ಷರ ಸಾಹಿತ್ಯ ಸಂಘದ ಅಧ್ಯಕ್ಷೆ ನಿತಾ ಉಪಸ್ಥಿತರಿದ್ದರು. ಅಕ್ಷರ ಸಾಹಿತ್ಯ ಸಂಘದ ಸಂಚಾಲಕ ಮಂಜುನಾಥ ಕುಲಾಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣಿತ ಶಿಕ್ಷಕ ವೆಂಕಟರಮಣ ಕಲ್ಕೂರ್ ವಂದಿಸಿದರು. ಅಧ್ಯಾಪಕಿ ಸಂಗೀತಾ ಶೆಟ್ಟಿ ಬಹುಮಾನಿತರ ಪಟ್ಟಿ ವಾಚಿಸಿದರು. ಅಕ್ಷರ ಸಾಹಿತ್ಯ ಸಂಘದ ಉಪಾಧ್ಯಕ್ಷೆ ಚೈತನ್ಯ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net