ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಸತ್ತೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಕ್ಯಾನ್ಸರ್ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ. ಶಿವಮೊಗ್ಗದ 59 ವರ್ಷದ ಮಹಿಳೆ 6 ತಿಂಗಳಿ0ದ ರಕ್ತಸ್ರಾವದಿಂದ ಬಳಲುತ್ತಿದ್ದರು. ಎಸ್‌ಡಿಎಂ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಮೊದಲ ಹಂತದ ಗರ್ಭಕೋಶದ ಕ್ಯಾನ್ಸರ್ ದೃಢಪಟ್ಟಿತ್ತು. ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ವಿವೇಕ ಹೊಸಕೇರಿ, ಸರ್ಜಿಕಲ್ ಆಂಕೋಲಾಜಿಸ್ಟ್ ಡಾ. ಪವನ್‌ಕುಮಾರ್ ಅವರನ್ನೂಳಗೊಂಡ ಶಸ್ತçಚಿಕಿತ್ಸಾ ತಂಡ ಮತ್ತು ಅರವಳಿಕೆ ತಂಡದ ಸಹಕಾರದೊಂದಿಗೆ ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸೆ ನಡೆಸಿದೆ. ಇದು ಎಸ್‌ಡಿಎಂ ಆಸ್ಪತ್ರೆಯಲ್ಲಿ ನಡೆದ ಮೊದಲ ಕ್ಯಾನ್ಸರ್ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆಯಾಗಿದೆ. ಮಹಿಳೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಗುಣಮುಖರಾಗುತ್ತಿದ್ದಾರೆ.