ಫೆ.7ರಂದು ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರ: ಆರೋಗ್ಯ ಇಲಾಖೆಯಿಂದ ಆಯೋಜನೆ

Laparoscopic Surgery Camp
Published on

ಮಂಡ್ಯ: ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಫೆ.7ರಿಂದ 25ರವರೆಗೆ ಉದರ ದರ್ಶಕ ಉಚಿತ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.

7ರಂದು ಪಾಂಡವಪುರ ಉಪವಿಭಾಗ ಆಸ್ಪತ್ರೆ, 11ರಂದು ಕೆ.ಆರ್.ಪೇಟೆ ತಾಲೂಕು ಆಸ್ಪತ್ರೆ, 12ರಂದು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, 13ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, 18ರಂದು ಬೆಳಗ್ಗೆ 10ಗಂಟೆಗೆ ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಮತ್ತು ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, 19ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, 20ರಂದು ಮದ್ದೂರು ತಾಲೂಕು ಆಸ್ಪತ್ರೆ, 21ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, 25ರಂದು ಶಿವಳ್ಳಿ ಸರ್ಕಾರಿ ಅರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net