ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ

30 skpp 3
Published on

ಸಕಲೇಶಪುರ : ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಕಟ್ಟಡ ಕಾರ್ಮಿಕರಿಗೆ ಅಧಿಕಾರಿಗಳು ಸೂಕ್ತ ತಿಳಿವಳಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಮಂಗಳವಾರ ತಾಪಂ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಹಮ್ಮಿಕೊಂಡಿದ್ದ ಕಟ್ಟಡ ಕಾರ್ಮಿಕರ ಪ್ರತಿಭಾನಿತ್ವ ಮಕ್ಕಳಿಗೆ ಲ್ಯಾಪ್‌ಟಾಪ್ ಹಾಗೂ ಇತರ ಪರಿಕರ ವಿತರಿಸಿ ಮಾತನಾಡಿದರು. ಕಾರ್ಮಿಕರ ಇಲಾಖೆಯ ಹಲವಾರು ಯೋಜನೆಗಳು ಕಾರ್ಮಿಕರಿಗೆ ತಿಳಿಯದೇ ವಿಫಲಗೊಳ್ಳುತ್ತಿವೆ. ಆದ್ದರಿಂದ, ಕಟ್ಟಡ ಕಾರ್ಮಿಕರನ್ನು ಗುರುತಿಸಿ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಆಗ ಈ ವರ್ಗದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಪಾಲಕರಿಗೆ ಹಾಗೂ ಸಮಾಜಕ್ಕೆ ಹೆಸರು ತರುವಂಥವರಾಗುತ್ತಾರೆಂದರು. ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಯಮುನಾ, ತಾಲೂಕು ಕಾರ್ಮಿಕ ಇಲಾಖೆ ಸಹಾಯಕ ನಿರ್ದೇಶಕ ರವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net