ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಎಬಿವಿಪಿ ನೇತೃತ್ವದಲ್ಲಿ ಸ್ಟೂಡೆಂಟ್ ಪ್ರೊಟೆಸ್ಟ್ ತಹಸೀಲ್ದಾರ್ ಕೆ.ರಾಘವೇಂದ್ರರಾವ್‌ಗೆ ಮನವಿ

290120 hadagali Students Protest for Laptop Issue
Published on

ಹೂವಿನಹಡಗಲಿ: ಪದವಿ ಹಂತದ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ತಾಲೂಕು ಘಟಕದ ನೇತೃತ್ವದಲ್ಲಿ ಪಟ್ಟಣದ ರುದ್ರಾಂಬ ಎಂ.ಪಿ.ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬುಧವಾರ ಶಾಸ್ತ್ರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂಘಟನೆ ಜಿಲ್ಲಾ ಸಂಚಾಲಕ ಮಂಜುನಾಥ ಮಾತನಾಡಿ, ಉನ್ನತ ಶಿಕ್ಷಣ ಸಚಿವಾಲಯ ಹಾಗೂ ನಿರ್ದೇಶಕರು ಕೇವಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ತಪ್ಪು ನಿರ್ಧಾರ ಕೈಗೊಂಡಿದ್ದಾರೆ. ಕೂಡಲೇ ತಮ್ಮ ನಿರ್ಧಾರ ಹಿಂಪಡೆಯಬೇಕು. ನಿರ್ಲಕ್ಷೃವಹಿಸಿದರೆ, ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ತಹಸೀಲ್ದಾರ್ ಕೆ.ರಾಘವೇಂದ್ರರಾವ್‌ಗೆ ಮನವಿ ಸಲ್ಲಿಸಲಾಯಿತು. ಸಂಘಟನೆ ತಾಲೂಕು ಸಂಚಾಲಕ ಎಚ್.ಎಂ. ಕೊಟ್ರೇಶ, ಕಾರ್ಯಕರ್ತರಾದ ಮಂಜುನಾಥ, ಉದಯ್‌ಎಂ.ಕೆ., ಗಣೇಶ, ಪ್ರಿಯಾಂಕಾ, ಮಂಗಳಗೌರಿ, ಕಾವೇರಿ, ಪ್ರತಿಭಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net