ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಿ: ಬಿಜೆಪಿ ಯುವ ಮುಖಂಡ ಸಚ್ಚಿದಾನಂದ ಒತ್ತಾಯ

Laptop distribution by Shankare Gowda Charitable Trust Mandya
Published on

ಮಂಡ್ಯ: ವೈದ್ಯಕೀಯ ಸೇರಿದಂತೆ ಉನ್ನತ ವ್ಯಾಸಂಗ ಮಾಡುವ ಆರ್ಥಿಕ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸೌಲಭ್ಯವನ್ನು ರಾಜ್ಯ ಸರ್ಕಾರ ಕಲ್ಪಿಸಿಕೊಡಬೇಕು ಎಂದು ಬಿಜೆಪಿ ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಒತ್ತಾಯಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಕಾರಸವಾಡಿ ಗ್ರಾಮದಲ್ಲಿ ಎನ್.ಶಂಕರೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಎನ್ನುವುದು ಬಡ ವಿದ್ಯಾರ್ಥಿಗಳಿಗೆ ಗಗನ ಕುಸುಮವಾಗಿದೆ. ದುಬಾರಿ ಶುಲ್ಕ, ಪರೀಕ್ಷಾ ಶುಲ್ಕ, ಕಲಿಕಾ ವಸ್ತುಗಳ ಬೆಲೆ ಹೆಚ್ಚಳದಿಂದ ಬಡ ವಿದ್ಯಾರ್ಥಿಗಳಿಗೆ ಹೊರೆಯಾಗಿದೆ. ಇದರಿಂದಾಗಿ ಹಲವರು ವಿದ್ಯಾಭ್ಯಾಸದಿಂದ ವಿಮುಖರಾಗುತ್ತಿದ್ದಾರೆ. ಆದ್ದರಿಂದ ಸರ್ಕಾರ ಇಂತಹ ವಿದ್ಯಾರ್ಥಿಗಳಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಬೇಕು. ಇನ್ನು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು ಪಡೆದಿರುವಂತಹ ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್‌ನಿಂದ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಕೊಂಚ ಮಟ್ಟದ ನೆರವಾಗಲಿದೆ ಎಂದರು.

ಕಾರಸವಾಡಿ ಗ್ರಾಮದ ಮುಖಂಡರಾದ ಅಣ್ಣಾಜಣ್ಣ, ಪಾಪಣ್ಣ, ರಾಮಕೃಷ್ಣ, ಬಿಜೆಪಿ ಮುಖಂಡರಾದ ಕೆ.ಟಿ.ಕೃಷ್ಣೇಗೌಡ, ಹನುಮಂತಣ್ಣ, ಸೋಮಣ್ಣ, ಕೆ.ಎಸ್.ಪ್ರಕಾಶ್, ಪ್ರಿತೇಶ್, ಧೂಮಣ್ಣರ ರಮೇಶ್, ನಂದೀಶ್, ವಿನಾಯಕ ಬಡಾವಣೆ ರಾಜೇಶ್, ಎಲ್ಐಸಿ ಸಣ್ಣೇಗೌಡ ಇತರರಿದ್ದರು. ಕಾರಸವಾಡಿ ಗ್ರಾಮದ ಡಿ.ರಾಜಣ್ಣ ಎಂಬುವರ ಮಗಳು ಆರ್.ಧ್ರುತಿ ವೈದ್ಯಕೀಯ ವಿಭಾಗದಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶಾತಿ ಪಡೆದ ಹಿನ್ನೆಲೆಯಲ್ಲಿ ಇದೇ ವೇಳೆ ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net