ಸಹ್ಯಾದ್ರಿ ಕಾಲೇಜಿನ ಅತಿಥಿ ಉಪನ್ಯಾಸಕರ ಲ್ಯಾಪ್‌ಟಾಪ್ ಕಳವು

kote police station
ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ
Published on

ಶಿವಮೊಗ್ಗ: ಸಹ್ಯಾದ್ರಿ ಕಾಲೇಜಿನ ಕೊಠಡಿಯಲ್ಲಿ ಅತಿಥಿ ಉಪನ್ಯಾಸಕರೊಬ್ಬರ ಲ್ಯಾಪ್‌ಟಾಪ್ ಕಳ್ಳತನವಾಗಿದೆ.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಭೂ ವಿಜ್ಞಾನ ವಿಭಾಗದ ಅತಿಥಿ ಉಪನ್ಯಾಸಕ ಡಾ. ಮಹೇಶ್ ಎಂಬುವರ ಲ್ಯಾಪ್‌ಟಾಪ್ ಕಳವು ಮಾಡಲಾಗಿದೆ. ಕಾಲೇಜಿಗೆ ತಮ್ಮ ಡೆಲ್ ಲ್ಯಾಪ್‌ಟಾಪ್ ತಂದಿದ್ದರು. ಭೂವಿಜ್ಞಾನ ವಿಭಾಗದ ತಮ್ಮ ಕೊಠಡಿಯಲ್ಲಿ ಲ್ಯಾಪ್‌ಟಾಪ್ ಚಾರ್ಜ್‌ಗೆ ಹಾಕಿ ಪಕ್ಕದ ಕೊಠಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು ತೆರಳಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾಠ ಮುಗಿಸಿ ತಮ್ಮ ಕೊಠಡಿಗೆ ಮರಳಿದಾಗ ಚಾರ್ಜ್‌ಗೆ ಹಾಕಿದ್ದ 60 ಸಾವಿರ ರೂ. ಮೌಲ್ಯದ ಡೆಲ್ ಲ್ಯಾಪ್‌ಟಾಪ್ ಕಳ್ಳತನವಾಗಿತ್ತು ಎಂದು ಆರೋಪಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net