ನದಿಗೆ ಉರುಳಿ ಬಿದ್ದ ಲಾರಿ: ಚಾಲಕ ಸಾವು

larry-accident-kopppal-munirabad-driver-death
Published on

ಕೊಪ್ಪಳ:ತಾಲೂಕಿ ಮುನಿರಾಬಾದ್ ಬಳಿ ತುಂಗಭದ್ರಾ ನದಿಗೆ ಲಾರಿ ಉರುಳಿ ಬಿದ್ದು, ಚಾಲಕ ಮೃತಪಟ್ಟಿದ್ದಾನೆ.

ಮೈನ್ಸ್ ತುಂಬಿದ್ದ ಲಾರಿ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದ್ದು, ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಅಲ್ಲದೇ ನದಿಗೆ ಬಿದ್ದಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ನದಿಯಲ್ಲಿ ನೀರಿಲ್ಲದ ಕಾರಣ ಬಂಡೆಗಳ ಮೇಲೆ ಬೋರಲಾಗಿ ಲಾರಿ ಬಿದ್ದಿದೆ. ಚಾಲಕ ಬಿಹಾರ ಮೂಲದವನೆಂದು ತಿಳಿದು ಬಂದಿದೆ. ಹೊಸಪೇಟೆ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net