ಲಾರ್ವ ಪರೀಕ್ಷೆ ಮಾಡುವವರ ಅಡ್ಡ ಪರಿಶೀಲಿಸಿದ ಟಿಎಚ್‌ಒ

26HDK00005
ಎಚ್.ಡಿ.ಕೋಟೆ ಪಟ್ಟಣದ ವಿಶ್ವನಾಥಯ್ಯ ಕಾಲನಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಟಿ.ರವಿಕುಮಾರ್ ಲಾರ್ವ ಸಮೀಕ್ಷೆ ಮಾಡುತ್ತಿರುವುದನ್ನು ಅಡ್ದ ಪರಿಶೀಲನೆ ನಡೆಸಿದರು.
Published on

ಎಚ್.ಡಿ.ಕೋಟೆ: ಪಟ್ಟಣದ ವಿವಿಧ ಬಡಾವಣೆಗಳಿಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮತ್ತು ತಂಡ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸುರೇಶ್ ಅವರು ಶುಕ್ರವಾರ ಭೇಟಿ ನೀಡಿ ಲಾರ್ವ ಸಮೀಕ್ಷೆ ಮಾಡುತ್ತಿರುವುದನ್ನು ಅಡ್ದ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಶುಕ್ರವಾರ ಮತ್ತು ಪ್ರತಿ ಮಂಗಳವಾರ ಎಚ್.ಡಿ. ಕೋಟೆ, ಹ್ಯಾಂಡ್ ಪೋಸ್ಟ್ ಮತ್ತು ಸರಗೂರು ಟೌನ್‌ನಲ್ಲಿ ಲಾರ್ವ ಸಮೀಕ್ಷೆಯನ್ನು ಮಾಡುತ್ತಾರೆ. ಇದರ ಜತೆಗೆ ಡೆಂೆ ಮತ್ತು ಚಿಕೂನ್ ಗುನ್ಯಾ ಪ್ರಕರಣಗಳು ಕಾಣಿಸಿಕೊಂಡಿರುವ ಗ್ರಾಮದಲ್ಲಿ ಕ್ರಿಯಾ ಯೋಜನೆಯ ಪ್ರಕಾರ ಪ್ರತಿ ದಿನ ಲಾರ್ವ ಸಮೀಕ್ಷೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು ಮತ್ತು ಸೊಳ್ಳೆಯಿಂದ ಹರಡುವ ಜ್ವರಗಳ ಬಗ್ಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಡೆಂೆ ಮತ್ತು ಚಿಕೂನ್ ಗುನ್ಯಾ ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ ಎಂದು ಮಾಹಿತಿ ನೀಡಿದರು.

ಈ ರೋಗದ ಮುಖ್ಯಲಕ್ಷಣಗಳು: ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗುಡ್ಡೆ ಹಿಂಭಾಗದಲ್ಲಿ ವಿಪರೀತ ನೋವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು, ಮತ್ತು ವಸಡುಗಳಲ್ಲಿ ರಕ್ತ ಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಇದು ಮಾರಣಾಂತಿಕವಾಗಬಹುದು. ಡೆಂೆ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಲಸಿಕೆ ಇರುವುದಿಲ್ಲ. ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಸೊಳ್ಳೆಗಳ ನಿಯಂತ್ರಣ ಡೆಂೆ ರೋಗದ ಹತೋಟಿಗೆ ಮುಖ್ಯ ವಿಧಾನ ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಅಂದರೆ ಮನೆಯ ಒಳಗೆ ಹಾಗೂ ಹೊರಗೆ ನೀರನ್ನು ಶೇಖರಿಸುವ ತೊಟ್ಟಿ ಮಣ್ಣಿನ ಮಡಿಕೆ ಉಪಯೋಗಿಸಿದ ಒರಳುಕಲ್ಲುಗಳು, ಹೂವಿನ ಕುಂಡಗಳು, ತಟ್ಟೆಗಳು, ಬಳಸದ ಟೈರುಗಳು, ಎಳನೀರು ಚಿಪ್ಪುಗಳು, ಒಡೆದ ಬಾಟಲ್‌ಗಳು, ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಮಾಹಿತಿ ನೀಡಿದರು.

ಮುಂಜಾಗ್ರತಾ ಕ್ರಮಗಳು: ಎಲ್ಲ ನೀರಿನ ತೊಟ್ಟಿಗಳು, ಡ್ರಮ್, ಬ್ಯಾರೆಲ್‌ಗಳು, ಏರ್ ಕೂಲರ್, ತೊಟ್ಟಿ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ, ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು. ಪ್ರತಿ ಶುಕ್ರವಾರ ಡ್ರೈ ಡೇ ಮಾಡಬೇಕು. ಇದರಿಂದ ಸೊಳ್ಳೆಗಳ ನಿಯಂತ್ರಣ ಆಗುತ್ತದೆ. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಬಾಟಲ್ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸಬೇಕು. ಸೂಕ್ತ ವಿಲೇವಾರಿ ಮಾಡಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ ಬಳಸಬೇಕು. ಮೈ ತುಂಬ ಬಟ್ಟೆ ಧರಿಸಬೇಕು. ಆರೋಗ್ಯ ಇಲಾಖೆ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗೇಂದ್ರ, ರವಿರಾಜ್, ಚಂದ್ರು, ಪ್ರದೀಪ ಆರೋಗ್ಯ ಸುರಕ್ಷಣಾಧಿಕಾರಿ ಲಕ್ಷ್ಮೀ ಭಟ್, ಸುಮದೇವಿ, ಶೋಭಾ, ಸವಿತಾ ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net