

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ವಿವಿಧೆಡೆಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನೂ ಒಂದು ತಿಂಗಳ ಕಾಲ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಮೇ 16ರವರೆಗೆ ಅರ್ಜಿ ಸಲ್ಲಿಸಬಹುದು. ಈ ಮೊದಲು ಏಪ್ರಿಲ್ 17 ಕೊನೆಯ ದಿನವಾಗಿತ್ತು.
ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 66 ಅಂಗನವಾಡಿ ಸಹಾಯಕಿ ಹುದ್ದೆ ಸೇರಿ ಒಟ್ಟು 92 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಕಾರ್ಯಕರ್ತೆ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋ ಸಡಿಲಿಕೆ ಇದೆ.ಕಾರ್ಯಕರ್ತೆ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಸಹಾಯಕಿ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ ಪಾಸಾಗಿರಬೇಕು 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಥಳೀಯರಾಗಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ಒಂದು ವರ್ಷದೊಳಗೆ ಸಂಬಂಧಪಟ್ಟ ತಹಸೀಲ್ದಾರ/ ಉಪತಹಸೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಡಿಡಿ.ಚ್ಞಜಚ್ಞಡಿಜ್ಟಿಛ್ಚ್ಟ್ಠಿಜಿಠಿ.ಚ್ಟ.್ಞಜ್ಚಿ.ಜ್ಞಿ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ, ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡಬೇಕು.
ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: ಮೇ 16.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್: https://anganwadirecruit.kar.nic.in ಸಂಪರ್ಕಿಸಬಹುದು.