ವಿವಿಧೆಡೆ ವಿಶೇಷ ಪೂಜೆ

SRP_11-02(a)jpg
Published on

ಶ್ರೀ ರಂಗಪಟ್ಟಣ: ಕಾರ್ತಿಕ ಮಾಸದ ಕಡೇ ಸೋಮವಾರದ ಪ್ರಯುಕ್ತ ಶ್ರೀರಂಗಪಟ್ಟಣದ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಪುನಸ್ಕಾರಗಳು ನೆರವೇರಿದವು.

ಪಟ್ಟಣದ ಶ್ರೀಗಂಗಾಧರೇಶ್ವರ ಸ್ವಾಮಿ ದೇವಾಲಯ ಹಾಗೂ ಜಿ.ಬಿ.ಹೊಳೆಯಲ್ಲಿರುವ ಶ್ರೀ ಚಂದ್ರಮೌಳೇಶ್ವರಸ್ವಾಮಿ ದೇಗುಲದಲ್ಲಿ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ತಾಲೂಕಿನ ಮಂಡ್ಯದಕೊಪ್ಪಲು ಸಮೀಪದ ಕಾವೇರಿ ಬೋರೇದೇವರ ದೇವಾಲಯದಲ್ಲಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ನೆರವೇರಿತು. ಸಾವಿರಾರು ಭಕ್ತರು ಜ್ಯೋತಿ ಬೆಳಗಿಸಿ ಭಕ್ತಿ ಮೆರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net