ಸಾಸಲು ಕ್ಷೇತ್ರದಲ್ಲಿ ಭಕ್ತ ಸಾಗರ

11-kkr1(12-23
Published on

ಕಿಕ್ಕೇರಿ: ಹೋಬಳಿಯ ಪುಣ್ಯ ಕ್ಷೇತ್ರ ಸಾಸಲು ಗ್ರಾಮಕ್ಕೆ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಭಕ್ತರ ದಂಡೇ ಹರಿದು ಬಂದಿತ್ತು.

ಸೋಮೇಶ್ವರ, ಶಂಭುಲಿಂಗೇಶ್ವರ, ಕುದುರೆಮಂಡಮ್ಮ, ನಾಗಬನದಲ್ಲಿ ದೇವರ ದರ್ಶನ ಪಡೆಯಲು ಹೋಬಳಿ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಬೆಳಗಿನಿಂದ ಸಂಜೆವರೆಗೂ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು. ಪುಷ್ಕರಣಿಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಲು ಪರದಾಡಿದರು.

ಅರ್ಚಕರು ಬ್ರಾಹ್ಮಿ ಮುಹೂರ್ತದಲ್ಲಿ ದೇವರಿಗೆ ಪಂಚಾಮೃತ ಅಭಿಷೇಕ, ಗಂಗಾಜಲ ಅಭಿಷೇಕ, ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಮತ್ತಿತರ ಪೂಜಾ ಕೈಂಕರ್ಯ ನೆರವೇರಿಸಿದರು. ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು.

ಸೋಮೇಶ್ವರ, ಶಂಭುಲಿಂಗೇಶ್ವರ ಅನ್ನದಾಸೋಹ ಸಮಿತಿಯಿಂದ ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು. ತಹಸೀಲ್ದಾರ್ ನಿಸರ್ಗಪ್ರಿಯ, ಇನ್ಸ್‌ಪೆಕ್ಟರ್ ರೇವತಿ ಮಾರ್ಗದರ್ಶನದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net