ಲಾಸ್ಯ ಶೆಟ್ಟಿ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

h7-rotary
Published on

ಹುಬ್ಬಳ್ಳಿ: ಇಲ್ಲಿಯ ದೇಶಪಾಂಡೆ ನಗರದ ರೋಟರಿ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಶೆಟ್ಟಿ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಗೆದ್ದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಹಾಸನದಲ್ಲಿ ಇತ್ತೀಚೆಗೆ 14 ವರ್ಷದೊಳಗಿನ ಬಾಲಕಿಯರಿಗಾಗಿ ರಾಜ್ಯಮಟ್ಟದ ಚೆಸ್ ಸ್ಪರ್ಧೆ ಏರ್ಪಡಿಸಲಾಗಿತ್ತು. ಇಲ್ಲಿ ಗೆದ್ದಿರುವ ಲಾಸ್ಯ ಮಹಾರಾಷ್ಟ್ರದಲ್ಲಿ ಜವರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವರು.

ವಿದ್ಯಾರ್ಥಿನಿ ಸಾಧನೆಗೆ ಎನ್‌ಎಲ್‌ಇ ಸಂಸ್ಥೆ ಅಧ್ಯಕ್ಷ ಪಿ.ವಿ. ದತ್ತಿ, ಕಾರ್ಯದರ್ಶಿ ರಾಜಾ ದೇಸಾಯಿ, ಸಹ ಕಾರ್ಯದರ್ಶಿ ಶಿವರಾಮ ಹೆಗಡೆ, ಮುಖ್ಯೋಪಾಧ್ಯಾಯಿನಿ ಸಾಂಡ್ರಾ ಫೋನಾಸಿಕಾ ಇತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net