

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದಲ್ಲಿ ಆಯುಷ್ ಸೇವಾ ಗ್ರಾಮ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ ಸದಸ್ಯೆ ನಿರ್ಮಲಾ, ಪಂ. ಅಭಿವೃದ್ಧಿ ಅಧಿಕಾರಿ ದೇವಿಕಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಜಿಲ್ಲಾ ಆಯುಷ್ ಅಧಿಕಾರಿ, ಆಯುಷ್ ಸೇವಾ ಗ್ರಾಮದ ಬಗ್ಗೆ ಮಾಹಿತಿ ನೀಡಿದರು. ಆಯುಷ್ ಇಲಾಖೆ ವತಿಯಿಂದ ಕಾರ್ಯಕ್ರಮದಲ್ಲಿ ಔಷಧ ಸಸ್ಯಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರು ಡಾ.ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸಿಎಚ್‌ಒ ಹಾಗೂ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕೊಡಗರಳ್ಳಿಯಲ್ಲಿ ಯೋಗ ಕಾರ್ಯಕ್ರಮ: ಆಯುಷ್ ಸೇವಾ ಗ್ರಾಮದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕಿನ ಕೊಡಗರಳ್ಳಿ ಗ್ರಾಮದ ನೇತಾಜಿ ಸಮುದಾಯ ಭವನದಲ್ಲಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಮಂಗಳವಾರ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರಾದ ನೀತಾ ಹರೀಶ್, ಚನ್ನಬಸವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರು, ಶಿಕ್ಷಕರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್‌ಕುಮಾರ್‌ರವರು ಯೋಗದ ಮಾಹಿತಿ ನೀಡಿ, ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿದರು. ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.
ಬೋಯಿಕೇರಿ ಶಾಲೆಯಲ್ಲಿ ಯೋಗ: ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮದಡಿ ಯೋಗ ಕಾರ್ಯಕ್ರಮ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್ ಕುಮಾರ್, ಮಕ್ಕಳಿಗೆ ಯೋಗದ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷ ಜಯಣ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಶಾಲೆಯ ಮುಖ್ಯ ಶಿಕ್ಷಕಿ ರಾಜು, ಶಾಲೆಯ ಶಿಕ್ಷಕರು, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ.ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿಎಚ್‌ಒ, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.