ದಸರಾ ವಿಶೇಷ ಕಾರ್ಯಾಚರಣೆಗೆ ಚಾಲನೆ

mng-nov2-ksrtc2
Published on


ಬೆಂಗಳೂರು: ಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಸಾರಿಗೆ ಸೌಲಭ್ಯ ಕಲ್ಪಿಸುವ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ವಿಭಾಗಗಳಲ್ಲಿ ದಸರಾ ವಿಶೇಷ ಕಾರ್ಯಾಚರಣೆಗೆ ವಿದ್ಯುಕ್ತವಾಗಿ ಬಸ್ಸುಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.
ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ವಾಹನಗಳಿಗೆ ಪೂಜೆ ಸಲ್ಲಿಸಿ ದಸರಾ ಕಾರ್ಯಾಚರಣೆ ಪ್ರಾರಂಭಿಸಲಾಯಿತಿ. ಈ ವೇಳೆ ಚಾಲಕ ನಿರ್ವಾಹಕರಿಗೆ ಸಿಹಿ ಹಂಚಿ ಶುಭ ಕೋರಲಾಯಿತು.ಈ ಸಂದರ್ಭದಲ್ಲಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net