ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನಕ್ಕೆ ಚಾಲನೆ

05tnpnewsfile02
ತಿ.ನರಸೀಪುರ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ ಉಚಿತ ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನದಲ್ಲಿ ಮಹಿಳೆಯರು, ಪುರುಷರು ಭಾಗಿಯಾಗಿದ್ದರು.
Published on

ತಿ.ನರಸೀಪುರ: ನಂ. 1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ಪಟ್ಟಣದ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ಆಯೋಜಿಸಿದ್ದ
ಗಾರ್ನಿಯರ್ ಹೇರ್ ಕಲರಿಂಗ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಮೂರು ದಿನಗಳ ಕಾಲ ಅಭಿಯಾನ ನಡೆಯಲಿದ್ದು, ಮೊದಲ ದಿನವೇ ಅಭೂತಪೂರ್ವ ಸ್ಪಂದನೆ ದೊರಕಿದೆ. ತಾಲೂಕಿನ ವಿವಿಧೆಡೆಯಿಂದ ಯುವಕ, ಯುವತಿಯರು ಹಾಗೂ ಸಂಘ, ಸಂಸ್ಥೆಗಳ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮಗೆ ಇಷ್ಟವಾದ ಕಲರ್‌ಗಳನ್ನು ಸೂಚಿಸಿ ಕಲರಿಂಗ್ ಮಾಡಿಸಿಕೊಳ್ಳುವ ಮೂಲಕ ಪತ್ರಿಕೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದಲ್ಲದೆ ತಾಲೂಕಿನ ವಿವಿಧ ಗ್ರಾಮಗಳಿಂದ ಪುರುಷರು ಹಾಗೂ ಮಹಿಳೆಯರು ಇದರ ಸದುಪಯೋಗ ಪಡೆದದ್ದು ವಿಶೇಷ.

ಈ ನಡುವೆ ಕೆಲ ಇಲಾಖೆ ಅಧಿಕಾರಿಗಳು ಕೂಡ ಇದರ ಉಪಯೋಗ ಪಡೆದುಕೊಂಡರು. ಪಶು ಇಲಾಖೆಯ ಹಿರಿಯ ವೈದ್ಯಾಧಿಕಾರಿ ಶಿವಮಲ್ಲಪ್ಪ, ಆರೋಗ್ಯ ಇಲಾಖೆಯ ನಿವೃತ್ತ ನೌಕರ ರಾಜಣ್ಣ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಲ್ಲದೆ, ಇಂತಹ ಕಾರ್ಯಕ್ರಮವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net