

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ತುಳುನಾಡು ಎಂದು ಕರೆಯಲ್ಪಡುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಪ್ರಮುಖ ಯಾತ್ರಾ ಕೇಂದ್ರವುಳ್ಳ 2024ರ ಕ್ಯಾಲೆಂಡರ್ ಅನ್ನು ಗ್ಲೋಬಲ್ ಮೀಡಿಯಾ ಹೊರತಂದಿದೆ. ಸತತ 22 ವರ್ಷದಿಂದ ಇಂಥ ಐತಿಹ್ಯ ಮಾಹಿತಿಯುಳ್ಳ ತುಳುನಾಡು ಪಂಚಾಂಗ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡುತ್ತ ಬಂದಿದೆ.
2024ರ ಕ್ಯಾಲೆಂಡರ್‌ನಲ್ಲಿ ಉಡುಪಿ ಕರ್ಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಂಟ್ವಾಳ ಪಾಣೆಮಂಗಳೂರಿನ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನ, ಮಂಗಳೂರು ಆದ್ಯಪಾಡಿಯ ಶ್ರೀ ಆದಿನಾಥೇಶ್ವರ ದೇವಸ್ಥಾನ, ಬಾರಕೂರು ಮಹತೋಭಾರ ಕೋಟೆಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಬೆಳ್ತಂಗಡಿ ಬಳಂಜದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಮಂಗಳೂರಿನ ಶರಭೇಶ್ವರ ದೇವರು ಶ್ರೀ ಶರವು ಮಹಾಗಣಪತಿ ದೇವಸ್ಥಾನ, ಬಂಟ್ವಾಳದ ಕುಂಡಾವುನ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನ, ಉಡುಪಿ ಕುಕ್ಕೆಹಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಡುಪಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನ, ಬೆಳ್ತಂಗಡಿ ತಣ್ಣೀರುಪಂತದ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಕುಂದಾಪುರ ಕೋಟೇಶ್ವರದ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ, ಬೆಳ್ತಂಗಡಿ ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನದ ಇವುಗಳ ಮೂಲ ವಿಗ್ರಹದ ಅಲಂಕಾರವುಳ್ಳ ನೈಜ ಚಿತ್ರಣವನ್ನು ಕ್ಯಾಲೆಂಡರ್ ಹೊಂದಿದೆ. ಇವುಗಳಿಗೆ ರಾಜ್ಯ ಹಾಗೂ ವಿದೇಶಗಳಲ್ಲೂ ಬೇಡಿಕೆ ಇದೆ.
ಬಿಡುಗಡೆ: ಗ್ಲೋಬಲ್ ಮೀಡಿಯಾದ 2024ರ ತುಳುನಾಡು ಪಂಚಾಂಗ ಕ್ಯಾಲೆಂಡರ್ ಅನ್ನು ಹುಬ್ಬಳ್ಳಿಯ ಬಂಟರ ಸಂಘದ ಆವರಣದಲ್ಲಿ ಭಾವಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶನಿವಾರ ಬಿಡುಗಡೆ ಮಾಡಿದರು.
ಪುತ್ತಿಗೆ ಮಠದ ಕಿರಿಯ ಸ್ವಾಮೀಜಿ ಶ್ರೀ ಸುಶೀಂದ್ರತೀರ್ಥ ಶ್ರೀಪಾದರು, ಹುಬ್ಬಳ್ಳಿ -ಧಾರವಾಡ ಬಂಟರ ಸಂಘದ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಕಾರ್ಯದರ್ಶಿ ಸತೀಶ ಶೆಟ್ಟಿ, ಉಪಾಧ್ಯಕ್ಷರಾದ ಶಾಂತಾರಾಮ ಶೆಟ್ಟಿ, ಪ್ರದೀಪ ಪಕ್ಕಳ, ಜಂಟಿ ಕಾರ್ಯದರ್ಶಿ ರಾಜೇಂದ್ರ ಶೆಟ್ಟಿ, ಗ್ಲೋಬಲ್ ಮೀಡಿಯಾದ ಸತೀಶ ರಾವ್, ದಿನೇಶ ಶೆಟ್ಟಿ ಇತರರು ಉಪಸ್ಥಿತರಿದ್ದರು