ಎಲ್‌ಕೆಜಿ, ಯುಕೆಜಿ ತರಗತಿಗೆ ಚಾಲನೆ

Oplus_16777216
ಸೋಮವಾರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಮಹೇಶ್ ಚಾಲನೆ ನೀಡಿದರು. ಜಯಲಕ್ಷ್ಮೀ ಮೋಹನ್, ಕೃಷ್ಣಮೂರ್ತಿ ಇದ್ದರು.
Published on

ಸೋಮವಾರಪೇಟೆ: ಸಮೀಪದ ಚೌಡ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಆರಂಭಿಸಿರುವ ಆಂಗ್ಲ ಮಾಧ್ಯಮದ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಚೌಡ್ಲು ಗ್ರಾಪಂ ಸದಸ್ಯ ಮಹೇಶ್ ತಿಮ್ಮಯ್ಯ ಸೋಮವಾರ ಚಾಲನೆ ನೀಡಿದರು.

ಶಾಲಾ ವ್ಯಾಪ್ತಿಯ ಗ್ರಾಮಗಳ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಆಂಗ್ಲ ಮಾಧ್ಯಮದ ಶಿಕ್ಷಣ ನೀಡಬೇಕು. ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಪಂಚಾಯಿತಿ ಸದಸ್ಯರಾದ ಜಯಲಕ್ಷ್ಮೀ, ಪ್ರವೀಣ್, ಭಾರತೀಯ ಯುವಕ ಸಂಘದ ಮೋಹನ್, ಕೃಷ್ಣಮೂರ್ತಿ, ಶ್ರೀಕಾಂತ್, ಗಾಂಧಿನಗರ ಮಾರಿಯಮ್ಮ ದೇವಾಲಯ ಸಮಿತಿ ಉಪಾಧ್ಯಕ್ಷ ಗೋಪಿ, ಕಾರ್ಯದರ್ಶಿ ಶಶಿಕುಮಾರ್, ಮುಖ್ಯಶಿಕ್ಷಕ ರಾಜಣ್ಣ, ಸಹ ಶಿಕ್ಷಕರು, ಪಾಲಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net