

ಮಡಿಕೇರಿ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಮಡಿಕೇರಿ ನಗರದ ಚಾಮುಂಡೇಶ್ವರಿ ಅಂಗನವಾಡಿ ಕೇಂದ್ರದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಕಾರ್ಯಕ್ರಮ ಸಂಚಾಲಕಿ ಕಾವ್ಯಾ, ಅಂಗನವಾಡಿ ಮಕ್ಕಳ ಪೋಷಕರು, ಅಂಗನವಾಡಿ ಕೇಂದ್ರದ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯ ಕಾರ್ಯಕ್ರಮ ಸಂಚಾಲಕಿ ಜಯಂತಿ, ನಿತಿನ್, ಎಂಎಸ್‌ಡಬ್ಲ್ಯೂ ವಿದ್ಯಾರ್ಥಿಗಳು, ಬಾಲ ವಿಕಾಸ ಸಮಿತಿಯ ಅಧ್ಯಕ್ಷರು, ಸದಸ್ಯರು ಮಕ್ಕಳ ತಾಯಂದಿರು, ಗರ್ಭಿಣಿಯರು, ಅಂಗನವಾಡಿ ಕಾರ್ಯಕರ್ತೆ ವಿಜಯ, ಸಹಾಯಕಿ ಯಶೋಧ ಇದ್ದರು.