

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ರಕ್ಷಣೆಗಾಗಿ ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಿರುವ ‘ಸುಹೃದ್ ಆ್ಯಪ್’ ಅನ್ನು ಸಂಸ್ಥೆಯ ನಿರ್ದೇಶಕ ಡಾ. ರವೀಂದ್ರನಾಥ್ ಬಿಡುಗಡೆಗೊಳಿಸಿದರು. ವೈದ್ಯಕೀಯ ಅಧೀಕ್ಷಕ ಡಾ. ಪ್ರಭಾಕರ್, ಡಾ. ಜಯಶ್ರೀ ಖರ್ಗೆ, ಡಾ. ಚಂದನ, ಡಾ. ನಾಗಮಣಿ ಇತರರು ಇದ್ದರು.