ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

dasara kridakuta
Published on

ಮಡಿಕೇರಿ: ತಾಲೂಕು ದಸರಾ ಕ್ರೀಡಾಕೂಟಕ್ಕೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ದೊರೆಯಿತು.


ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ ಚಾಲನೆ ನೀಡಿದರು. ಅಥ್ಲೆಟಿಕ್ಸ್ ಸಂಬಂಧಿಸಿದಂತೆ ೧೦೦, ೨೦೦, ೪೦೦, ೮೦೦ ಹಾಗೂ ೧೫೦೦ ಹಾಗೂ ೫ ಸಾವಿರ, ೧೦ ಸಾವಿರ ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ತಟ್ಟೆ ಎಸೆತ, ರಿಲೇ, ಹಾಗೆಯೇ ವಾಲಿಬಾಲ್, ಕೋಕೋ, ಥ್ರೋಬಾಲ್, ಪುಟ್ಬಾಲ್ ಆಟಗಳು ನಡೆದವು.


ಮಡಿಕೇರಿ ತಾಲೂಕಿಗೆ ಸಂಬಂಧಿಸಿದಂತೆ ಹಾಕಿ ಆಯ್ಕೆ ಪ್ರಕ್ರಿಯೆಯು ಕುಶಾಲನಗರ ಕೂಡಿಗೆಯ ಹಾಕಿ ಟರ್ಪ್ ಮೈದಾನದಲ್ಲಿ ಸೆ.೨೧ ರಂದು ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದರು.


ಸರ್ಕಾರ ದಸರಾ ಕ್ರೀಡಾಕೂಟಕ್ಕೆ ಅವಕಾಶ ಮಾಡಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಜಿಲ್ಲಾ, ವಿಭಾಗ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳು ನಡೆಯಲಿದ್ದು, ಈ ಅವಕಾಶವನ್ನು ಕ್ರೀಡಾಪಟುಗಳು ಬಳಸಿಕೊಳ್ಳುವಂತೆ ಸಲಹೆ ಮಾಡಿದರು. ಕ್ರೀಡಾ ತರಬೇತಿದಾರರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net