ಪಕ್ಷದ ನಾಯಕರ ರಕ್ಷಣೆಗೆ ಸಂವಿಧಾನ ಬಳಕೆ

party
Published on

ಪಡುಬಿದ್ರಿ: ದಲಿತರ ಬಗ್ಗೆ ಕಾಳಜಿಯಿದ್ದರೆ ಕಾಂಗ್ರೆಸ್ ಪಕ್ಷದವರು ಯಾಕೆ ಅಂಬೇಡ್ಕರ್ ರಚಿಸಿದ ಸಂವಿಧಾನ ತಿದ್ದುಪಡಿ ಮಾಡಿದ್ದಾರೆ. ದಲಿತ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷದ ಒಳಮರ್ಮ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಜನರು ತಿಳಿದುಕೊಳ್ಳಬೇಕಿದೆ ಎಂದು ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಕಾಪು ಮಂಡಲ ಬಿಜೆಪಿ ವತಿಯಿಂದ ಭಾನುವಾರ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಯಾವತ್ತೂ ಸಂವಿಧಾನಕ್ಕೆ ಬೆಲೆ ಕೊಟ್ಟಿಲ್ಲ. ಅಂಬೇಡ್ಕರ್ ಅವರನ್ನು ಮತ್ತು ಅವರು ರಚಿಸಿದ ಸಂವಿಧಾನ ತಿರಸ್ಕರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಈಗ ಅಧಿಕಾರದ ಆಸೆಗೆ, ಪಕ್ಷದ ನಾಯಕರ ರಕ್ಷಣೆಗೆ ಸಂವಿಧಾನವನ್ನು ಗುರಾಣಿಯಂತೆ ಬಳಸಿಕೊಂಡು ತಿರುಗಾಡುತ್ತಿದೆ. ಭಾರತ ಸಂವಿಧಾನವನ್ನು 106 ಬಾರಿ ತಿದ್ದುಪಡಿ ಮಾಡಲಾಗಿದೆ. 88 ತಿದ್ದುಪಡಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವಾಗಲ್ಲೇ ಆಗಿದೆ ಎಂದು ಟೀಕಿಸಿದರು.

ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಉಡುಪಿ-ಮಂಗಳೂರು ಪ್ರಭಾರಿ ಕೆ.ಉದಯ್ ಕುಮಾರ್ ಶೆಟ್ಟಿ, ಕಾಪು ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ್, ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ ಉಪಸ್ಥಿತರಿದ್ದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶರಣ್‌ಕುಮಾರ್ ಮಟ್ಟು ಕಾರ್ಯಕ್ರಮ ನಿರೂಪಿಸಿದರು.

ಕಾಂಗ್ರೆಸ್ ಪಕ್ಷ ಹಿಂದೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನದಲ್ಲಿ ತಿದ್ಧುಪಡಿ ತಂದು, ದೇಶದ ಕಾನೂನನ್ನು ತಮಗೆ ಬೇಕಾದ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡಿರುವುದನ್ನು ಮರೆತು ಬಿಟ್ಟಿದ್ದಾರೆಯೇ? -ಗುರ್ಮೆ ಸುರೇಶ್ ಶೆಟ್ಟಿ ಶಾಸಕ https://www.vijayavani.net/three-pedestrians-injured-in-car-crash https://www.vijayavani.net/couple-arrested-for-stealing-gold-and-fleeing

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net